ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ.
ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ.
ಅಲ್ಲದೇ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯಾತಿಗಣ್ಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
Laxmi News 24×7