Breaking News

ಇಂದು ಪಂಜಾಬ್​ ಸಿಎಂ ಮದುವೆ: ವಧು ಗುರುಪ್ರೀತ್​ ಕೌರ್​ ವಯಸ್ಸೆಷ್ಟು? ಇಲ್ಲಿದೆ ಅವರ ಸಂಪೂರ್ಣ ಪರಿಚಯ​

Spread the love

ಚಂಡೀಗಢ: ಇಂದು ಪಂಜಾಬ್ ಜನರ​ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ.

ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ…

48 ವರ್ಷದ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರು ಇಂದು ಚಂಡೀಗಢದಲ್ಲಿ ನಡೆಯಲಿರುವ ಖಾಸಗಿ ಸಮಾರಂಭದಲ್ಲಿ ಡಾ. ಗುರುಪ್ರೀತ್​ ಕೌರ್​ ಎಂಬುವರನ್ನು ವರಿಸಲಿದ್ದಾರೆ. ಈ ಹಿಂದೆ ಸ್ಟ್ಯಾಂಡ್​ ಅಪ್​​ ಕಾಮಿಡಿಯನ್​ ಆಗಿದ್ದ ಮಾನ್​, 6 ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಯಿಂದ ಡಿವೋರ್ಸ್​ ಪಡೆದುಕೊಂಡಿದ್ದಾರೆ. ಮಾನ್​ ಮತ್ತು ಗುರುಪ್ರೀತ್​ ನಡುವೆ 16 ವರ್ಷಗಳ ವಯಸ್ಸಿನ ಅಂತರವಿದೆ.

ವಧುವಿನ ಬಗ್ಗೆ ತಿಳಿಯುವುದಾದರೆ, ಮಾನ್​ ಕೈಹಿಡಿಯಲಿರುವ ವಧುವಿನ ಹೆಸರು ಡಾ. ಗುರುಪ್ರೀತ್​ ಕೌರ್​. ಇವರ ವಯಸ್ಸು 32. ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಕುರುಕ್ಷೇತ್ರ ಜಿಲ್ಲೆಯ ಪೆಹೊವಾ ಮೂಲದವರು. ಅವರ ತಂದೆ ಇಂದ್ರಜಿತ್​ ಸಿಂಗ್​ ಓರ್ವ ರೈತ. ಅವರ ತಾಯಿ ರಾಜ್​ ಕೌರ್​ ಗೃಹಿಣಿ. ಗುರುಪ್ರೀತ್​ ಕೌರ್​ಗೆ ಇಬ್ಬರು ಸಹೋದರಿಯರಿದ್ದಾರೆ. ಇಬ್ಬರು ಕೂಡ ವಿದೇಶದಲ್ಲಿದ್ದಾರೆ. ಮಾನ್​ ಅವರ ನಿಕಟ ಮೂಲಗಳ ಪ್ರಕಾರ, ಎರಡೂ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಸಂಬಂಧ ಇದೆ.

 

ಭಗವಂತ್ ಮಾನ್​ ಅವರಿಗೆ ಈಗಾಗಲೇ ಇಂದ್ರಪ್ರೀತ್ ಕೌರ್ ಎಂಬುವರ ಜತೆ ಮದುವೆ ಆಗಿತ್ತು. ಇವರಿಬ್ಬರ ಸಂಬಂಧ 2015ರಲ್ಲಿ ವಿಚ್ಛೇದನ ಪಡೆಯುವ ಮೂಲಕ ಮುರಿದು ಬಿದ್ದಿತ್ತು. ಇವರ ಮಾಜಿ ಪತ್ನಿ ಹಾಗೂ ಮಕ್ಕಳು ಅಮೆರಿಕದಲ್ಲಿ ನೆಲೆಸಿದ್ದಾರೆ. 6 ವರ್ಷದಿಂದ ಏಕಾಂಗಿಯಾಗಿದ್ದ ಭಗವಂತ್ ಮಾನ್​ ಅವರು ಇದೀಗ ಮತ್ತೊಂದು ಮದ್ವೆ ಆಗುತ್ತಿದ್ದಾರೆ. ತಾಯಿ ಹಾಗೂ ಸಹೋದರಿ ಇಬ್ಬರೂ ಮತ್ತೊಂದು ಮದ್ವೆ ಆಗಲು ಒಪ್ಪಿಸಿದ್ದಾರೆ. 


Spread the love

About Laxminews 24x7

Check Also

ಜನವರಿ 22ರಿಂದ ಜನವರಿ 31ರವರೆಗೆ ಜಂಟಿ ಅಧಿವೇಶನ, ನರೇಗಾ ಬಗ್ಗೆ ವಿಶೇಷ ಚರ್ಚೆ: ಸಿಎಂ

Spread the loveಬೆಂಗಳೂರು: ಜನವರಿ 22 ರಿಂದ ಜನವರಿ 31ರ ವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಅಧಿವೇಶನದ ವೇಳೆ ನರೇಗಾ(MGNREGA) ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ