Breaking News

‘ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲ: ಸಿದ್ಧರಾಮಯ್ಯ

Spread the love

ಬೆಂಗಳೂರು: ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಶಿಕ್ಷಣ ಸಚಿವ ಬಿ.ಸಿ,ನಾಗೇಶ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

 

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯ. ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ.

ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ ದೆವ್ವ ಮೈಮೇಲೆ ಹತ್ತಿ ಕುಣಿಯಲಾರಂಭಿಸುತ್ತದೆ. ತಾವು ಮಾತನಾಡಬೇಕಾದರೆ ಕನಿಷ್ಠ ಮಟ್ಟದ ಪ್ರಜ್ಞೆ, ಲಜ್ಜೆ, ನೈತಿಕತೆ ಇವ್ಯಾವುಗಳೂ ಇಲ್ಲದಂತೆ ವರ್ತಿಸಲು ಪ್ರಾರಂಭಿಸುತ್ತಾರೆ. ಅದರ ಭಾಗವಾಗಿ ಕಲ್ಬುರ್ಗಿಯಲ್ಲಿ ನಿನ್ನೆಬಿ.ಸಿ ನಾಗೇಶ್ಅವರು ಮಾತನಾಡಿದ್ದಾರೆ.

‘ಮಕ್ಕಳು ಶಾಲೆಗೆ ಬರುವುದು ಕಲಿಯುವುದಕ್ಕೆ ಹೊರತು, ಶೂ ಸಾಕ್ಸ್ ಹಾಕಿಕೊಳ್ಳುವುದಕ್ಕೆ ಅಲ್ಲ’ ಎಂದು ಸಚಿವರು ಹೇಳಿದ್ದಾರೆ. ನಾನು ನಾಗೇಶ್ ಅವರನ್ನು ಕೇಳಬಯಸುತ್ತೇನೆ, ನಿಮ್ಮ ಮಕ್ಕಳಾಗಲಿ ಅಥವಾ ನೀವಾಗಲಿ ಎಂದಾದರೂ ಕಾಲಿಗೆ ಚಪ್ಪಲಿ ಇಲ್ಲದೆ ಓಡಾಡಿದ ಅನುಭವ ಇದೆಯೆ, ಅದರ ಅವಮಾನ, ಕೀಳರಿಮೆಗಳನ್ನು ಅನುಭವಿಸಿದ ಉದಾಹರಣೆಗಳಿವೆಯೆ? ಎಂದು ಅವರು ಪ್ರಶ್ನಿಸಿದರು.

ಕಾನ್ವೆಂಟ್ ಸ್ಕೂಲಿಗೆ ಹೋಗುವ ಮಕ್ಕಳು ಶುಭ್ರ ಬಟ್ಟೆ, ಟೈ, ಕಾಲಿಗೆ ಶೂ, ಸಾಕ್ಸ್ ಹಾಕಿಕೊಂಡು ನಡೆದಾಡುವುದನ್ನು ನೋಡಿದಾಗ ಅದೇ ಬೀದಿಯಲ್ಲಿ, ಅದೇ ಹಳ್ಳಿಯಲ್ಲಿ ಆಟವಾಡುವ ಬಡವರ ಮಕ್ಕಳು ಬರಿಗಾಲಲ್ಲಿ, ಹರಿದ ಬಟ್ಟೆಯಲ್ಲಿದ್ದರೆ ನಿಮಗೆ ಏನೂ ಅನ್ನಿಸುವುದಿಲ್ಲವೆ?


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ