Breaking News

ಎಸಿಬಿ ರದ್ದುಗೊಳಿಸಿ ಬಲಯುಕ್ತ ಲೋಕಾಯುಕ್ತ ಮುಂದುವರೆಯಲಿ : ಭಾಸ್ಕರ್ ರಾವ್

Spread the love

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯದ ಆಪ್ ಮುಖಂಡ ಭಾಸ್ಕರ್ ರಾವ್ ಟ್ವೀಟ್ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆಯನ್ನು ಅನುಮೋದಿಸಿರುವ ಅವರು, ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರ ಅಭಿಪ್ರಾಯ 100% ಸತ್ಯ ಎಂದಿದ್ದಾರೆ.

ಈ ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿತ್ತು. ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಮಾತ್ರ. ಆದ್ದರಿಂದ ಎಸಿಬಿಯನ್ನು ಮುಚ್ಚಬೇಕು ಮತ್ತು ಬಲವಾದ ಸ್ವತಂತ್ರ ಲೋಕಾಯುಕ್ತ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ. ಎಸಿಬಿ ಕಾರ್ಯವೈಖರಿಯನ್ನು ಪ್ರಶ್ನಿಸಿರುವ ನ್ಯಾ.ಹೆಚ್.ಪಿ.ಸಂದೇಶ್ ಇತ್ತೀಚಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.


Spread the love

About Laxminews 24x7

Check Also

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿದ ಗ್ರಾಮಸ್ಥರು

Spread the loveಚಿಕ್ಕಬಳ್ಳಾಪುರ: ಹಸು ಮೇಯಿಸಲು ಹೋಗಿದ್ದ ರೈತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಗ್ರಾಮಸ್ಥರು ಹಿಡಿದು ಅರಣ್ಯ ಇಲಾಖೆ ವಶಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ