Breaking News

ಕಸ ಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಸ್ಥಳದಲ್ಲೇ ಮೃತ

Spread the love

ಬೆಳಗಾವಿ: ನಗರದ ಬಸವೇಶ್ವರ ವೃತ್ತದ ಬಳಿಯ ಎಲ್ಐಸಿ ಕಚೇರಿಯ ಆವರಣದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ

ಟೀಳಕವಾಡಿಯ ಪಿಕೆ ಕ್ವಾರ್ಟಸ್​ನಲ್ಲಿರುವ ಅನಿತಾ ರಾಜೇಶ್ ಬನ್ಸ್ (52) ಮೃತಪಟ್ಟವರು. ಅನಿತಾ ಎಂದಿನಂತೆ ಎಲ್​ಐಸಿ ಕಚೇರಿಗೆ ಆಗಮಿಸಿ ಆವರಣ ಶುಚಿಗೊಳಿಸುತ್ತಿದ್ದರು‌‌. ಈ ಸಂದರ್ಭದಲ್ಲಿ ಎಲ್​ಐಸಿ ಆವರಣದಿಂದ ಕಾರು ಹೊರತೆಗೆಯುವ ಸಂದರ್ಭದಲ್ಲಿ ಚಾಲಕ ಗುರುರಾಜ ಕುಲಕರ್ಣಿ, ಮಹಿಳೆಗೆ ಡಿಕ್ಕಿ ಹೊಡೆಸಿದ್ದಾನೆ.

ಘಟನೆಯಿಂದ ರೊಚ್ಚಿಗೆದ್ದ ಕುಟುಂಬಸ್ಥರು ಹಾಗೂ ಸ್ಥಳೀಯರು ಕಾರು ಚಾಲನೆ ಮಾಡುತ್ತಿದ್ದ ಕುಲಕರ್ಣಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ