ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಘಟನೆಯಲ್ಲಿ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಬ್ಯಾಡಗಿ ತಾಲೂಕು ಸರಕಾರಿ ಆಸ್ಪತ್ರೆ ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.
ಬಸ್‌ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಬೆಂಗಳೂರಿನಿಂದ ಮುಂಬೈನತ್ತ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಗಾಯಾಳುಗಳನ್ನು ಪೊಲೀಸ್ ವಾಹನ ಹಾಗೂ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Laxmi News 24×7