Breaking News

ಕರ್ನಾಟಕ ಸರ್ಕಾರದಿಂದ ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಸಹಾಯವಾಣಿ

Spread the love

ಬೆಂಗಳೂರು: ಶುಕ್ರವಾರ ಸಂಜೆ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿರುವ ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ ಸಹಾಯವಾಣಿ ಆರಂಭಿಸಿದೆ.

 

ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ.‌ 080-1070, 22340676, ಇಮೇಲ್: incomedmkar@gmail.com

ಮೇಘಸ್ಫೋಟದಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ ಭಕ್ತರು ವಾಸ್ತವ್ಯ ಹೂಡಿದ್ದ ಟೆಂಟ್‌ಗಳು ಮತ್ತು ಸಮುದಾಯ ಅಡುಗೆ ಮನೆಯತ್ತ ನುಗ್ಗಿ ಬಂದಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೇತೃತ್ವದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರೆಣೆ ನಡೆಸಲಾಗುತ್ತಿದೆ.

ಸಿಎಂ ಕಂಬನಿ: ಪವಿತ್ರ ಅಮರನಾಥ ಯಾತ್ರೆ ಸಂದರ್ಭದಲ್ಲಿ ಮೇಘಸ್ಪೋಟದಿಂದಾಗಿ ಜನ ಯಾತ್ರಾರ್ಥಿಗಳು ಸಾವನ್ನಪ್ಪಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ