Breaking News

2-3 ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಸಿಎಂ

Spread the love

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಇನ್ನೂ 2-3 ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ. ಅದಕ್ಕೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇಂದೂ ಕೂಡ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮಳೆ ಅಬ್ಬರದ ನಡುವೆ ಉತ್ತರ ಕರ್ನಾಟಕ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ಬೆಳಗಾವಿ ಜಿಲ್ಲೆ ಅಥಣಿ, ವಿಜಯಪುರ, ಬಾಗಲಕೋಟೆಯ ಹಲವೆಡೆ ಭೂಮಿ ಕಂಪಿಸಿದೆ.


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ