Breaking News

ಭಾರಿ ಮಳೆ ಹಿನ್ನೆಲೆ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿದ್ದಾರೆ.

Spread the love

ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಶಿಥಿಲಗೊಂಡಿದ್ದ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡ ಘಟನೆ ಚಿತ್ತಾಪೂರ ಪಟ್ಟಣದಲ್ಲಿ ನಡೆದಿದೆ. ಆರೀಫಾ ಬೇಗಂ (60) ಮೃತ ವೃದ್ಧೆ.

ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಅನೇಕ‌ ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ರಸ್ತೆಗಳ ಮೇಲೆ ನೀರು ನಿಂತು ಅವಘಡಗಳು ಸಂಭವಿಸುತ್ತಿವೆ. ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ