Breaking News

ಬಕ್ರೀದ್‌ಗೆ ಪ್ರಾಣಿ ಬಲಿ ನಿಷೇಧಿಸಿ ಆದೇಶ

Spread the love

ಹೊಸಪೇಟೆ (ವಿಜಯನಗರ): ‘ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿ ಬಲಿ (ಕುರ್ಬಾನಿ) ನಿಷೇಧಿಸಲಾಗಿದೆ’ ಎಂದು ನಗರಸಭೆ ಪೌರಾಯುಕ್ತ ಮನೋಹರ್‌ ತಿಳಿಸಿದ್ದಾರೆ.

‘ಜು. 10ರಂದು ಬಕ್ರೀದ್‌ ಹಬ್ಬ ಆಚರಿಸಲಾಗುತ್ತಿದ್ದು, ಹಬ್ಬದ ದಿನದಿಂದ ಮೂರು ದಿನಗಳ ವರೆಗೆ ಪ್ರಾಣಿ ಬಲಿ ನೀಡಲಾಗುತ್ತದೆ.

ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತಗಳು ನಿಗದಿಪಡಿಸಿದ ಸ್ಥಳಗಳಲ್ಲಿ ಅದನ್ನು ಮಾಡತಕ್ಕದ್ದು. ರಸ್ತೆ, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಡುವಂತಿಲ್ಲ’ ಎಂದು ಶನಿವಾರ ತಿಳಿಸಿದ್ದಾರೆ.

‘ಎಲ್ಲರೂ ಕೋವಿಡ್‌ ನಿಯಮಗಳನ್ನು ಪಾಲಿಸಬೇಕು. ಪ್ರಾಣಿ ಬಲಿ ಕೊಡುವಾಗ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡಬೇಕು. ಅನಂತರ ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು’ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ