Breaking News

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಜಾ ಕೋರಿ ಪ್ರಧಾನಿ ಮೋದಿಗೆ ಖಾಸಗಿ ಶಾಲೆಗಳ ಪತ್ರ

Spread the love

ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ( Textbook revision controversy ) ಸದ್ಯಕ್ಕೆ ಮುಗಿಯುವಂತಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ವಿಚಾರ ಸೇರಿದಂತೆ ಶಿಕ್ಷಣ ಇಲಾಖೆಯ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ವಜಾಗೊಳಿಸುವಂತೆ ಸೂಚಿಸಬೇಕು ಎಂದು ರುಪ್ಸಾ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ.

 

ಈ ಬಗ್ಗೆ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ( ರುಪ್ಸಾ ಕರ್ನಾಟಕ ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ರಾಜ್ಯದ ಪ್ರತಿ ಮಗುವಿಗೂ ಕಡ್ಡಾಯವಾಗಿ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಆದ್ರೇ ಕರ್ನಾಟಕದಲ್ಲಿ ಇದರ ಕನಿಷ್ಠ ಜ್ಞಾನವೂ ಇಲ್ಲದ ಪಕ್ಕಾ ವ್ಯಾಪಾರಿ ಮನೋಭಾವನದ ವ್ಯಕ್ತಿ ಮಂತ್ರಿಯಾಗಿರುವ ಹಿನ್ನಲೆಯಲ್ಲಿ, ಇದು ಈಡೇರುತ್ತಿಲ್ಲ. ಈ ಹಿನ್ನಲೆಯಲ್ಲಿ ಅವರನ್ನು ವಜಾ ಮಾಡುವಂತೆ ಸಿಎಂ ಬೊಮ್ಮಾಯಿಗೆ ಸೂಚಿಸಬೇಕು ಎಂದು ಕೋರಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ