Breaking News

ಗನ್​ಮ್ಯಾನ್​ಗೆ ಪಿಎಸ್​ಐ ಪಟ್ಟ? ಶಾಸಕನ ಪುತ್ರ, ಸಹೋದರನ ಸುತ್ತ ಅಕ್ರಮದ ಘಾಟು- ಬಾಯಿಬಿಟ್ಟ ಕಿಂಗ್​ಪಿನ್​

Spread the love

ಅಫಜಲಪುರ (ಕಲಬುರಗಿ): ಪಿಎಸ್​ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಆಳಕ್ಕೆ ಹೋದಷ್ಟೂ ಹಲವು ಗಣ್ಯರ ಹೆಸರು ಹೊರಕ್ಕೆ ಬರುತ್ತಿದೆ. ಕೆಲ ದಿನಗಳ ಹಿಂದಷ್ಟೇ ಎಡಿಜಿಪಿ ಅಮೃತ್ ಪೌಲ್ ಅವರು ಈ ಕೇಸ್​ನಲ್ಲಿ ಸಿಲುಕಿಕೊಂಡಿದ್ದರು. ಇದೀಗ ಕಾಂಗ್ರೆಸ್​ ಶಾಸಕರೊಬ್ಬರ ಮಗ ಹಾಗೂ ಅವರ ಸಹೋದರ ಕೂಡ ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

 

ಅಫಜಲಪುರದ ಕಾಂಗ್ರೆಸ್​ ಶಾಸಕ ಎಂ.ವೈ.ಪಾಟೀಲ್ ಪುತ್ರ ಅರುಣ್ ಪಾಟೀಲ್ ಹಾಗೂ ಶಾಸಕರ ಸಹೋದರ ಎಸ್.ವೈ.ಪಾಟೀಲ್​ಗೆ ಸಂಕಷ್ಟ ಎದುರಾಗಿದೆ. ಶಾಸಕ ಎಂ.ವೈ.ಪಾಟೀಲ್ ಅವರ ಗನ್​ಮ್ಯಾನ್​ ಹಯ್ಯಾಳಿ ದೇಸಾಯಿ ಅವರನ್ನು ಪಿಎಸ್​ಐ ಮಾಡುವ ಉದ್ದೇಶದಿಂದ ಅಕ್ರಮ ನಡೆದಿರುವ ಶಂಕೆ ಉಂಟಾಗಿದೆ. ದೇಸಾಯಿ ಅವರನ್ನು ಅಕ್ರಮವಾಗಿ ಪಿಎಸ್​ಐ ಮಾಡಲು ಹೊರಟಿದ್ದರು ಎಂಬ ಆರೋಪ ಕೇಳಿಬಂದಿದೆ.

ಈ ಮಾಹಿತಿ ನೀಡಿರುವುದು ಪಿಎಸ್‌ಐ ಅಕ್ರಮ ನೇಮಕಾತಿಯ ಕಿಂಗ್​ಪಿನ್​ ಆರ್.ಡಿ.ಪಾಟೀಲ್! ಸಿಐಡಿ ಮುಂದೆ ಈ ಮಾಹಿತಿಯನ್ನು ಈತ ಹೇಳಿದ್ದಾನೆ ಎನ್ನಲಾಗಿದೆ.

ಗನ್​ಮ್ಯಾನ್​ಗೆ ಪಿಎಸ್​ಐ ಪಟ್ಟ!
ಹಯ್ಯಾಳಿ ದೇಸಾಯಿ ಅವರನ್ನು ಪಿಎಸ್‌ಐ ಮಾಡಬೇಕು ಎಂದು ಅರುಣ್​ ಅವರು, ಮಂಜುನಾಥ್‌ ಮೇಳಕುಂದಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ಮಾತನಾಡಲು ಮಂಜುನಾಥ್‌ ಮೇಳಕುಂದಿಗೆ ಕರೆಮಾಡಿದ್ದ ಆರ್​.ಡಿ.ಪಾಟೀಲ್​ ಅವರು, ಅರುಣ್ ಜತೆ ಮಾತನಾಡುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ. ಈ ಸೂಚನೆ ಮೇರೆಗೆ ಮಂಜುನಾಥ್‌ ಮೇಳಕುಂದಿ ಶಾಸಕರ ಪುತ್ರ ಅರುಣ್ ಕುಮಾರ್​ಗೆ ಕರೆ ಮಾಡಿ30 ಲಕ್ಷಕ್ಕೆ ಡೀಲ್ ಕುದರಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ