Breaking News

ಪಿಎಸ್ಐ ನೇಮಕ ದೊಡ್ಡ ಹಗರಣ ಇದೆ, ಇದನ್ನು ಮುಚ್ಚಿ ಹಾಕಲು ಯತ್ನ ಮಾಡಲಾಗುತ್ತಿದೆ: ಶಾಸಕ ಯತ್ನಾಳ

Spread the love

ಪಿಎಸ್ಐ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಪಿಎಸ್ಐ ಅಕ್ರಮದಲ್ಲಿ ಪಾಲು (ಪೌಲ್) ಎಲ್ಲರದ್ದು ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು ಹಗರಣದಲ್ಲಿ ಯಾರು ಯಾರು ಇದ್ದಾರೆ ಎಂದು ಎಲ್ಲರೂ ಬಿಚ್ಚಿ ಹೇಳಬೇಕು ಎಂದು ಆಗ್ರಹಿಸಿದರು ‌ ಮಾಜಿ ಸಿಎಂ ಮಗ ಸಹಿತ ಪಿಎಸ್ಐ ಹಗರದಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಇದು ಒಂದು ದೊಡ್ಡ ಹಗರಣ ಇದೆ, ಇದನ್ನು ಮುಚ್ಚಿ ಹಾಕಲು ಯತ್ನ ಮಾಡಲಾಗುತ್ತಿದೆ, ನ್ಯಾಯಾಧೀಶರು ಸ್ಟ್ರಾಂಗ್ ಇದ್ದಾರೆ. ಅದಕ್ಕಾಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಬಾರದು ಎಂದು ಒತ್ತಾಯಿಸಿದರು.

ಪಿಎಸ್ಐ ಅಕ್ರಮದಲ್ಲಿ ದೊಡ್ಡ ದೊಡ್ಡವರು ಇದ್ದಾರೆ. ಮಾಜಿ ಸಿಎಂ ಮಗ ಇದ್ದಾರೆ ಎಂದ್ರೇ ಯಾರು..? ಎಂದು ಪ್ರಶ್ನಿಸಿ ದೇವೇಗೌಡರ ಮಗ…? ಸಿದ್ದರಾಮಯ್ಯ ಮಗ ಬರ್ತಾರೆ… ಅದಕ್ಕಾಗಿ ಯಾರು ಮಗ ಇದ್ದಾರೆ ಎನ್ನುವುದನ್ನು ಹೇಳಬೇಕು ಎಂದು ಯತ್ನಾಳ ಆಗ್ರಹಿಸಿದರು.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ