Breaking News

ಬೆಳಗಾವಿ ವಿಭಾಗ ಅಮ್ಲನ್ ಆದಿತ್ಯ ಬಿಸ್ವಾಸ್, & 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ.

ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ವಿವರ ಹೀಗಿದೆ.

 

ಅಮ್ಲನ್ ಆದಿತ್ಯ ಬಿಸ್ವಾಸ್, ಐಎಎಸ್ (ಕೆ.ಎನ್: 1997) ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಬೆಳಗಾವಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಮುಂದಿನ ಆದೇಶದವರೆಗೆ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ವಿಭಾಗಕ್ಕೆ ವರ್ಗಾಯಿಸಿಸಲಾಗಿದೆ.

ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ಐಎಎಸ್ (ಕೆ.ಎನ್: 2010) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸಹಕಾರ ಸಂಘಗಳ ರಿಜಿಸ್ಟ್ರಾರ್ ಮತ್ತು ಬೆಂಗಳೂರಿನ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಾಗಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಲ್ಲಿ ನೇಮಿಸಲಾಗಿದೆ.

ಸುಂದರೇಶಬಾಬು ಎಂ., ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಗದಗ ಜಿಲ್ಲೆ, ಗದಗ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಬೆಂಗಳೂರ ಇಲ್ಲಿಗೆ ನೇಂಕ ಮಾಡಲಾಗಿದೆ.

ಸುರಳ್ಕರ್ ವಿಕಾಸ್ ಕಿಶೋರ್, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆ, ಕೊಪ್ಪಳ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರನ್ನು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಹೊನ್ನಾಂಬ, ಐಎಎಸ್ (ಕೆ.ಎನ್: 2012), ಕಾರ್ಯದರ್ಶಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಬೆಂಗಳೂರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ, ಗದಗ ಜಿಲ್ಲೆಗೆ ವರ್ಗಾವಣೆ ಮಡಲಾಗಿದೆ.

ಆರ್.ಲತಾ, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ, ಚಿಕ್ಕಬಳ್ಳಾಪುರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಲೋಖಂಡೆ ಸ್ನೇಹಲ್ ಸುಧಾಕರ್, ಐಎಎಸ್ (ಕೆ.ಎನ್: 2017) ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಉಪ ಕಾರ್ಯದರ್ಶಿಯಾಗಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.

  


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ