ಬೆಂಗಳೂರು, ಜುಲೈ 11: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ರಾಜಕೀಯ ಲೆಕ್ಕಾಚಾರಗಳು ಶುರುವಾಗಿದೆ. ಕಾಂಗ್ರೆಸ್ ಕಟ್ಟಾಳುಗಳನ್ನು ಕೂಗಿ ಕರೆದ ಹೈಕಮಾಂಡ್ ಕಟ್ಟುನಿಟ್ಟಿನ ಕಟ್ಟಪ್ಪಣೆಯೊಂದನ್ನು ನೀಡಿದೆ. ಸುಖಾಸುಮ್ಮನೆ ವೈಯಕ್ತಿಕ ದಾಳಿ ನಡೆಸದಂತೆ ಎಚ್ಚರಿಕೆ ನೀಡಿದೆ.
ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೊತೆಗೆ ಕೇಂದ್ರದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೌಪ್ಯ ಸಭೆಯೊಂದನ್ನು ನಡೆಸಿದ್ದಾರೆ. ಈ ವೇಳೆ ಚುನಾವಣಾ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಲಾಗಿದ್ದು, ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ಕೆಲವು ಟಿಪ್ಸ್ ಕೊಟ್ಟಿದ್ದಾರೆ. ಇದರ ಜೊತೆಗೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದಕ್ಕೆ ಯಾವ ರೀತಿ ಸಜ್ಜುಗೊಳ್ಳಬೇಕು ಎಂಬುದನ್ನು ತಿಳಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಚುನಾವಣೆ ಭವಿಷ್ಯದ ಸುಳಿವು ಕಾಂಗ್ರೆಸ್ ಕಂಡುಕೊಂಡಿದೆ. ಈ ಹಿನ್ನೆಲೆ ‘ತೆನೆ ಹೊತ್ತ ಮಹಿಳೆ’ ಬಗ್ಗೆ ಸಾಫ್ಟ್ ಕಾರ್ನರ್ ಹೊಂದುವಂತೆ ಕಾಂಗ್ರೆಸ್ ಹೈಕಮಾಂಡ್ ಖಡಕ್ ಸಂದೇಶ ರವಾನಿಸಿದೆ. ಹೈಕಮಾಂಡ್ ಹಾಕಿಕೊಂಡಿರುವ ಲೆಕ್ಕಾಚಾರಗಳೇನು?, ಜೆಡಿಎಸ್, ಎಚ್. ಡಿ. ದೇವೇಗೌಡ, ಎಚ್. ಡಿ. ಕುಮಾರಸ್ವಾಮಿ ಬಗ್ಗೆ ಕೈ ನಾಯಕರಿಗೆ ಹೈಕಮಾಂಡ್ ಕೊಟ್ಟ ಸೂಚನೆ ಏನು?, ರಾಹುಲ್ ಗಾಂಧಿ ಸೂಚನೆ ಹಿಂದಿರುವ ತಂತ್ರಗಾರಿಕೆಗಳೇನು?, ಅಸಲಿಗೆ ಕಾಂಗ್ರೆಸ್ ಕಂಡುಕೊಂಡಿರುವ ಅದೊಂದು ಸುಳಿವಾದರೂ ಏನು ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.