Breaking News

ಸಂಪಾದಿಸಲು ಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

Spread the love

ಬೆಂಗಳೂರು: ಸಂಪಾದಿಸಲು ಸಶಕ್ತನಾದ ಪತಿಗೆ ಜೀವನಾಂಶ ನೀಡಬೇಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಜೀವನಾಂಶ ಕೋರಿ ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಲೋಕ್ ಅರಾಧೆ, ಜೆ.ಎಂ. ಖಾಜಿ ಅವರಿದ್ದ ಪೀಠ ಈ ಕುರಿತಾಗಿ ಆದೇಶ ನೀಡಿದೆ.

 

ಪತ್ನಿಯಿಂದ ಶಾಶ್ವತ ಜೀವನಾಂಶ ನೀಡಬೇಕೆಂದು ಪತಿ ಕೋರಿದ್ದರು. 1994 ರಿಂದಲೂ ಪತಿ, ಪತ್ನಿ ಬೇರೆಯಾಗಿ ವಾಸಿಸುತ್ತಿದ್ದರು. ಸೆಕ್ಯೂರಿಟಿ ಗಾರ್ಡ್ ಆಗಿದ್ದ ಪತಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಜೀವನಾಂಶ ಕೋರಿದ್ದರು.

ಕೆಲಸ ಬಿಟ್ಟಿರುವುದಾಗಿ ಪತ್ನಿಯಿಂದ ಜೀವನಾಂಶಕ್ಕೆ ಅವರು ಕೋರಿಕೊಂಡಿದ್ದರು. ಪತ್ನಿ ಸಹಕಾರ ಬ್ಯಾಂಕ್ ಉದ್ಯೋಗಿಯಾಗಿದ್ದು, 8,000 ರೂ. ಸಂಬಳವಿತ್ತು. ಉಡುಪಿಯ ಕೋರ್ಟ್ ವಿಚ್ಛೇದನ ನೀಡಿ ಜೀವನಾಂಶ ನೀಡಲು ನಿರಾಕರಿಸಿತ್ತು. ಪತಿ ಜೀವನಾಂಶ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

15 ವರ್ಷದ ಮಗನನ್ನು ಪತ್ನಿ ನೋಡಿಕೊಳ್ಳುತ್ತಿದ್ದಾರೆ. ಪತಿ ಸಂಪಾದಿಸಲು ಸಕ್ಷಮವಾದ ದೇಹದಾರ್ಡ್ಯತೆ ಹೊಂದಿದ್ದಾರೆ. ಅಲ್ಲದೇ, ಪಿತ್ರಾರ್ಜಿತ ಮನೆ, ಆಸ್ತಿಯಲ್ಲಿ ಪಾಲು ಇರುವ ಹಿನ್ನೆಲೆಯಲ್ಲಿ ಜೀವನಾಂಶ ಕೋರಿದ್ದ ಪತಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ