Breaking News

ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..

Spread the love

ಧಾರವಾಡ: ಕಾರು ಚಲಾಯಿಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವಿಗೀಡಾಗಿದ್ದು, ಕಾರು ಹೊಲಕ್ಕೆ ನುಗ್ಗಿ ನಿಂತಿದೆ. ಧಾರವಾಡ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಇಂಜಿನಿಯರ್, ನವಲಗುಂದ ತಾಲೂಕಿನ ಲೋಕನಾಥ್ ಗುತ್ತಲ್ (29) ಸಾವಿಗೀಡಾಗಿದ್ದಾರೆ.

 

ಇವರು ಕರ್ತವ್ಯದ‌ ಮೇಲೆ ಹುಬ್ಬಳ್ಳಿಯಿಂದ ನವಲಗುಂದಗೆ ಹೊರಟಿದ್ದರು. ಮಾರ್ಗಮಧ್ಯೆ ಹೃದಯಾಘಾತಕ್ಕೀಡಾಗಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದೆ. ಇಂಜಿನಿಯರ್ ಕಾರಿನಲ್ಲೇ ಸಾವಿಗೀಡಾಗಿದ್ದರು. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ