ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ರೋಗಿಗಳ ಸಂಬಂಧಿಗಳು ಹಾಗೂ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ರೋಗಿಗಳ ಸಂಬಂಧಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆಸ್ಪತ್ರೆ ಸಿಬ್ಬಂದಿಯ ಹಣ, ಮೊಬೈಲ್ ಕದಿಯುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆರೋಪಿ ಮಾರುತಿ ಮಂಗಸೂಳಿ ಎಂಬಾತನನ್ನು ಹಿಡಿದು ಎಪಿಎಂಸಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.