Breaking News

ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Spread the love

ಬೆಳಗಾವಿ – ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ; ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳು ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿವೆ.

ಇಲ್ಲಿರುವ ಲಿಂಕ್ ಗಳನ್ನು ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ-

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ೨ ಲಕ್ಷ ರೂ. ವರೆಗೆ ಆರ್ಥಿಕ ನೆರವು, ಗರಿಷ್ಠ ಶೇ. ೧೫ ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಸಮುದಾಯಗಳು ಹೊರತುಪಡಿಸಿ)
ಕುಟುಂಬದ ವಾರ್ಷಿಕ ವರಮಾನ ಗ್ರಾಮಂತರ ಪ್ರದೇಶದವರಿಗೆ ೯೮,೦೦೦ ರೂ.ಗಳು, ಪಟ್ಟಣ ಪ್ರದೇಶದವರಿಗೆ ೧,೨೦,೦೦೦ ರೂ.ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸುವಿಧಾ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವೂ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಿರಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು https://suvidha.karnataka.gov.in ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ನಿಗಮದ ವೆಬ್‌ಸೈಟ್


Spread the love

About Laxminews 24x7

Check Also

ಪರೀಕ್ಷೆ ಬರೆದ 11ದಿನದಲ್ಲಿ ಪ್ರಕಟಗೊಂಡಿದೆ ಫಲಿತಾಂಶ

Spread the love ಬೆಳಗಾವಿ: ಆರ್‌ಪಿಡಿ ಕಾಲೇಜು, ಚೆನ್ನಮ್ಮ ವಿವಿಯಿಂದ ಸ್ಪಾಯತ್ತತೆ, ಮೊದಲ ಫಲಿತಾಂಶ ಬೆಳಗಾವಿ : ಇಲ್ಲಿನ ಆರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ