Breaking News
Home / new delhi / ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ; ಅಂಗಾಂಗ ದಾನ ಮಾಡಿ ಮೂವರ ಬಾಳಿಗೆ ಬೆಳಕಾದ ಕಮಲವ್ವ

ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ; ಅಂಗಾಂಗ ದಾನ ಮಾಡಿ ಮೂವರ ಬಾಳಿಗೆ ಬೆಳಕಾದ ಕಮಲವ್ವ

Spread the love

ಬೆಳಗಾವಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಎತ್ತಿನಗುಡ್ಡ ಗ್ರಾಮದ 48 ವರ್ಷದ ಕಮಲವ್ವ ಕೆಲಗೇರಿ ಅವರು ತಮ್ಮ ಅಂಗಾಂಗಳನ್ನು ದಾನ ಮಾಡಿ ಮೂವರ ಜೀವ ಉಳಿಸಿ ಸಮಾಜಕ್ಕೆ ಪ್ರೇರಣಾದಾಯಿಯಾಗಿದ್ದಾರೆ.

 

ಕಮಲವ್ವ ಅವರ ಒಂದು ಕಿಡ್ನಿಯನ್ನು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಕಸಿ ಮಾಡಲು ಗ್ರೀನ್ ಕಾರಿಡಾರ್ ಮೂಲಕ ಧಾರವಾಡದಿಂದ ತೆಗೆದುಕೊಂಡು ಬರಲಾಯಿತು.

 

ಇನ್ನೊಂದು ಕಿಡ್ನಿಯನ್ನು ಎಸ್ ಡಿಎಂ ಆಸ್ಪತ್ರೆಯಲ್ಲಿರುವ ರೋಗಿಗೆ ಕಸಿ ಮಾಡಿದರೆ, ಲೀವರ್ ನ್ನು ಬೆಂಗಳೂರಿನ‌ ಆರ್ ಆರ್ ನಗರದ ಸ್ಪರ್ಶ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಕಳುಹಿಸಿಕೊಡಲಾಗಿದೆ.

 

ಪೊಲೀಸರು ಸಂಪೂರ್ಣವಾಗಿ ಜೀರೋ ಟ್ರಾಫಿಕ್ ಅಥವಾ ಗ್ರೀನ್ ಕಾರಿಡಾರ್ (ಹಸಿರು ಪಥ) ಮೂಲಕ ಅಂಗಾಂಗಗಳನ್ನು ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.

 

ಮಹಿಳೆಯ ಮೆದಳು ನಿಷ್ಕ್ರಿಯಗೊಂಡಿದ್ದರೂ ಕೂಡ ಅಂಗಾಂಗಳು ಕಾರ‍್ಯನಿರ್ವಹಿಸುತ್ತಿದ್ದವು. ಮೆದುಳು ನಿಷ್ಕ್ರಿಯಗೊಂಡ ಮಹಿಳೆ ಪತಿ ಹಾಗೂ ಮೂವರು ಮಕ್ಕಳಿಗೆ, ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ, ನೀವು ನೀಡುವ ಅಂಗಾಂಗ ಇನ್ನೊಬ್ಬರ ಜೀವ ಉಳಿಸುತ್ತದೆ ಎಂದು ಹೇಳಿದಾಗ, ಸ್ವಇಚ್ಚೆಯಿಂದ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿದರು.

 

ಮೆದುಳು ನಿಷ್ಕ್ರೀಯಗೊಂಡ ಮಹಿಳೆಯ ಕಿಡ್ನಿಯನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳಗಾವಿಯ 52 ವರ್ಷದ ವ್ಯಕ್ತಿಗೆ ಕಸಿ ಮಾಡುವಲ್ಲಿ ಡಾ. ಆರ್ ಬಿ‌ ನೇರಲಿ, ಡಾ. ವಿಕ್ರಮ‌ ಪ್ರಭಾ, ಡಾ. ರಿತೇಶ ವೆರ್ನೆಕರ ಅವರ ತಂಡವು ನಿರತರಾದರು. ಮೃತಪಟ್ಟರೂ ಕೂಡ 3 ಜನರ ಜೀವ ಉಳಿಸಿ ಸಾರ್ಥಕತೆ ಮೆರೆದ ಮಹಿಳೆ, ಬೆಳಗಾವಿ ಹಾಗೂ ಹುಬ್ಬಳ್ಳಿ ಪೊಲೀಸ ಇಲಾಖೆಯ ಕಾರ್ರ್ಯ ಅತ್ಯಂತ ಶ್ಲಾಘನೀಯವಾದ್ದು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್ ಕಾರಿಡಾರ ನಿರ್ಮಿಸಿ ಅಂಗಾಂಗಳನ್ನು ಶೀಘ್ರ ಸ್ಥಳಾಂತರಿಸಲು ತೀವ್ರವಾದ ಮಳೆಯಲ್ಲಿಯೇ ನೆನೆಯುತ್ತ ಅವಕಾಶ ಕಲ್ಪಿಸಿಕೊಟ್ಟರು.

 

ಅಂಗಾಂಗಳನ್ನು ದಾನ ಮಾಡಿದ ಮಹಿಳೆ ಹಾಗೂ ಅವಳ ಕುಟುಂಬ ಸದಸ್ಯರು, ಪೋಲಿಸರ ಕಾರ‍್ಯವನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ,ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ ವಿ ಜಾಲಿ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.


Spread the love

About Laxminews 24x7

Check Also

3 ತಿಂಗಳಿಂದಲೇ ಅಂಜಲಿ ಹತ್ಯೆಗೆ ಪ್ಲಾನ್; ವಕೀಲರ ಬಳಿಯೂ ಮಾಹಿತಿ ಸಂಗ್ರಹ!

Spread the love ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಹತ್ಯೆಯ ಆರೋಪಿಯನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಕೊಲೆ ಆರೋಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ