Breaking News

ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆ

Spread the love

ಅಣ್ಣಿಗೇರಿ ತಾಲೂಕಿನ ಅಂಜುಮನ್ ಶಾದಿ ಮಹಲ್ ನಲ್ಲಿ ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಾ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆ.

ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ 2ಎ ಮತ್ತು ಸರಕಾರದಲ್ಲಿ ಓ.ಬಿ.ಸಿ ಮೀಸಲಾತಿಯ ಹೋರಾಟಕ್ಕೆ ಜಯವಾಗಲಿ ಎನ್ನುವ ಘೋಷಣೆಯೊಂದಿಗೆ ಈ ಸಭೆಯನ್ನು ಆಯೋಜಿಸಲಾಗಿದ್ದು, ಸಮಾಜದ ಬೆಳವಣಿಗೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು

ಪಂಚಮಸಾಲಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಯುವ ಜನತೆಯ ಉದ್ಯೋಗಕ್ಕಾಗಿ ಮೀಸಲಾತಿಯ ಹೋರಾಟವೇ ಈ ಸಭೆಯ ಪ್ರಮುಖ ಉದ್ದೇಶವಾಗಿದೆ.

ಈ ಸಂದರ್ಭದಲ್ಲಿ ಆರ್ ಕೆ ಪಾಟೀಲ, ಸಿದ್ದನಗೌಡ ಪಾಟೀಲ, ರಾಮನಗೌಡ ಪಾಟೀಲ, ಬಾಪುಗೌಡ ಪಾಟೀಲ, ವಿಜಯ ಕುಲಕರ್ಣಿ, ಷಣ್ಮುಖ ಗುರಕಾರ, ಮಹೇಶ ದೇಸಾಯಿ, ಚಂಬಣ್ಣ ಹಾಳದುಟರ, ಶರಣಪ್ಪಗೌಡ ದಾನಪ್ಪಗೌಡರ, ಬಸನಗೌಡ ಕುರಹಟ್ಟಿ, ಬಾಳನಗೌಡ ಪಾಟೀಲ ಹಾಗೂ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ