Breaking News

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

Spread the love

ನವದೆಹಲಿ: ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

 

ವಿಕ್ರಾಂತ್ ರೋಣ ಚಿತ್ರದ ಪ್ರಚಾರದಲ್ಲಿ ಬಿಸಿಯಾಗಿರುವ ನಟ ಕಿಚ್ಚ ಸುದೀಪ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಈ ನಡುವೆ ಇಂದು ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.

 

ಈ ವೇಳೆ ಕೇಂದ್ರ ಸಚಿವರ ಜತೆ ಉಪಹಾರವನ್ನು ಸೇವಿಸಿದ ಕಿಚ್ಚ ಸುದೀಪ್ ಕೆಲ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ