Breaking News

ಹಿಡಕಲ್‌ ಡ್ಯಾಮ್‌ನಲ್ಲಿ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಅಕ್ಕ-ಪಕ್ಕದ ಮನೆಯವರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Spread the love

ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿಡಕಲ್‌ ಡ್ಯಾಮ್‌ನಲ್ಲಿ ಇಂದು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಡ್ಯಾಮ್‌ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದ ಪರಶುರಾಮ ಹಲಕರ್ಣಿ (32) ಕೊಲೆಯಾದವರು. ಗ್ರಾಮದ ಆಂಜನೇಯ ಮಂದಿರದ ಹತ್ತಿರ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಮೂವರು ದುಷ್ಕರ್ಮಿಗಳು, ಕೊಚ್ಚಿ ಕೊಲೆ ಮಾಡಿದ್ದಾರೆ.

ಕೊಲೆ ನಡೆದ ಕೆಲವು ಗಂಟೆಗಳ ನಂತರ ಆರೋಪಿ ಬಸವರಾಜ ಗಲಾಟೆ (30) ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಇನ್ನಿಬ್ಬರು ಆರೋಪಿಗಳಾದ ಮಂಜು ಪುಟಜಾನೆ (24) ಹಾಗೂ ಕೆಂಪಣ್ಣ ನೇಸರಗಿ (30) ತಾವಾಗಿಯೇ ಪೊಲೀಸರ ಮುಂದೆ ಶರಣಾಗಿದ್ದಾರೆ.

ಕೊಲೆಯಾದ ವ್ಯಕ್ತಿ ಹಾಗೂ ಆರೋಪಿಗಳು ಅಕ್ಕ-ಪಕ್ಕದ ಮನೆಯವರೇ ಆಗಿದ್ದಾರೆ. ಹಳೆಯ ವೈಷಮ್ಯವೇ ಕೊಲೆಗೆ ಕಾರಣವೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಆದರೆ, ಈ ಮೂವರ ಮಧ್ಯೆ ಹೇಗೆ ಸಂಪರ್ಕವಿತ್ತು. ಕೊಲೆಗೆ ನಿಖರ ಕಾರಣ ಏನೆಂದು ವಿಚಾರಣೆ ಬಳಿಕ ತಿಳಿಯಲಿದೆ ಎಂದು ಎಸ್ಪಿ ಡಾ. ಸಂಜೀವ್ ಪಾಟೀಲ್​​ ತಿಳಿಸಿದ್ದಾರೆ.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ