ಮುಖ್ಯಮಂತ್ರಿ ಆಯ್ಕೆ ಚುನಾವಣೆ ಮುಗಿದ ಮೇಲೆ ನೋಡೋಣ, ಸದ್ಯಕ್ಕೆ ನಾನು ಸಿಎಂ ರೇಸ್‍ನಲ್ಲಿ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಹಾರೂಗೇರಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸೈಕಲ್ ಜಾಥಾ ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಸಿದ್ದರಾಮಯ್ಯ ಸಿಎಂ ಆಗುವ ಇಂಗಿತ ವಿಚಾರಕ್ಕೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಚುನಾವಣೆ ಆದ ಮೇಲೆ ಮುಖ್ಯಮಂತ್ರಿಗಳ ಆಯ್ಕೆ ಆಗುತ್ತದೆ.
ಸಧ್ಯಕ್ಕೆ ನಾನು ಸಿಎಂ ರೇಸ್‍ನಲ್ಲಿ ಇಲ್ಲ ಎಂದರುಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯ ಭಿನ್ನಮತವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಈ ಸಂಬಂಧ ಸಾಕಷ್ಟು ಬಾರಿ ಹೇಳಿದ್ದೇವೆ. ನಮ್ಮಲ್ಲಿ ಭಿನ್ನಮತವಿಲ್ಲ ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಎಷ್ಟು ಬಾರಿ ಹೇಳಬೇಕು ಪದೇ, ಪದೇ ಎಲ್ಲರೂ ಹೇಳಿದ್ದೇವೆ ಎಂದು ಸತೀಶ ಜಾರಕಿಹೊಳಿ ತಮ್ಮ ಅಸಮಾಧಾನ ಹೊರ ಹಾಕಿದರು.