Breaking News

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

Spread the love

ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು.

ರಾಜ್‌ಕುಮಾರ್‌ ರಸ್ತೆಯ ಮೈಸೂರು ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ಧಲಿಂಗಾ ಸ್ವಾಮೀಜಿ, ಸೌಮ್ಯನಾಥ ಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಗೋಪಾಲಯ್ಯ ಇದ್ದರು. ಮಹಾಲಕ್ಷ್ಮಿ ಲೇಔಟ್‌ನ ಭೋವಿಪಾಳ್ಯ ಕೊಳಗೇರಿ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಯಿತು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ