Breaking News

ಬಿಎಸ್ ವೈ ಜೊತೆ ಜಿಲ್ಲಾ ಪ್ರವಾಸಕ್ಕೆ ಮುಂದಾದ ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶಗಳ ಬಗ್ಗೆ ಬಿಜೆಪಿ ಚಿಂತನಾ ಸಭೆಯಲ್ಲಿ ಚರ್ಚೆ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾ ಪ್ರವಾಸ ನಡೆಸಲು ನಿರ್ಧರಿಸಿದ್ದಾರೆ.

ಜುಲೈ ‌21ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಮಂಡ್ಯ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ.

 

ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ.ಆರ್. ಪೇಟೆಯಲ್ಲಿ 1500 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

 

ಕೆ.ಆರ್. ಪೇಟೆಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶಕ್ಕೂ ಬಿಜೆಪಿ ಸಿದ್ದತೆ ಮಾಡಿದೆ. ಸಮಾವೇಶದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಕೆಆರ್ ಎಸ್ ಹಾಗೂ ಕಬಿನಿ ಜಲಾಶಯಕ್ಕೆ ಬೊಮ್ಮಾಯಿ ಬಾಗಿನ ಅರ್ಪಿಸಲಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ