Breaking News

ಅವೈಜ್ಞಾನಿಕ ಕಾಮಗಾರಿ : ರಸ್ತೆ ಮೇಲೆ ನಿಲ್ಲುತ್ತಿದೆ ಕೊಳಚೆ ನೀರು,

Spread the love

ಕುಷ್ಟಗಿ : ಅವೈಜ್ಞಾನಿಕ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ ಸಿಸಿ ರಸ್ತೆಯ ಮೇಲೆ ನೀರು ನಿಲ್ಲುತ್ತಿರುವುದು ನಿತ್ಯ ತೊಂದರೆ ಅನುಭವಿಸುವಂತಾಗಿದೆ.

ದಿನ ಬೆಳಗಾದರೆ ಈ ಗಲೀಜು ದಾಟಿಕೊಂಡು ಮನೆ ಸೇರಬೇಕಿದೆ.

ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು.

 

ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು. ಈ ರಸ್ತೆಯನ್ನು ಸಿಸಿ ರಸ್ತೆಯಾಗಿ ಅಭಿವೃದ್ಧಿಪಡಿಸಿದ ಕೆಲಸ ಮೆಚ್ಚುವ ಬದಲಿಗೆ ಹಿಡಿಶಾಪ ಹಾಕುವಂತಾಗಿದೆ.

ಗುತ್ತಿಗೆದಾರ ರಹೇಮಾನ ದೊಡ್ಡಮನಿ ಅವರು ನಿರ್ವಹಿಸಿದ ಈ ಅವೈಜ್ಞಾನಿಕ ಸಿಸಿ ರಸ್ತೆ ಕಾಮಗಾರಿ ಇನ್ನೂ ಸರಿಪಡಿಸಿಲ್ಲ. ಈ ಸಿಸಿ ರಸ್ತೆಯಲ್ಲಿ ಮಧ್ಯಭಾಗದಲ್ಲಿ ತಗ್ಗು ಆಗಿದ್ದು ಮಳೆಗಾಲದಲ್ಲಿ ಬಿದ್ದ ಮಳೆ ನೀರು ಮುಂದೆ ಹರಿದು ಹೋಗುವ, ನೀರು ಇಂಗುವ ವ್ಯವಸ್ಥೆ ಇಲ್ಲ. ಹೀಗಾಗಿ ಸಿಸಿ ರಸ್ತೆಯ ಮೇಲೆ ನೀರು ನಿಲ್ಲುತ್ತಿದೆ ನಿತ್ಯ ಈ ಗಲೀಜು ನೀರು ದಾಟಿಕೊಂಡು ಹೋಗಬೇಕಿದ್ದು ವಾಹನ ಸಂಚರಿಸಿದರೆ ಸಿಡಿಸಿಕೊಳ್ಳಬೇಕಿದೆ.


Spread the love

About Laxminews 24x7

Check Also

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Spread the loveರಾಯಚೂರು: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಜ್ಜೆ, ಜೋಳದ ಬೆಳೆ ಹಾಳಾಗಿದ್ದು, ರೈತರು ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ