Breaking News

ಆಗಸ್ಟ್ 3 ರಂದು ‘ಸಿದ್ದರಾಮೋತ್ಸವ’: ಕಾರ್ಯಕ್ರಮ ಆಯೋಜನೆ ಖರ್ಚು-ವೆಚ್ಚಕ್ಕೆ ಸಿದ್ದರಾಮಯ್ಯ ಟಿಪ್ಸ್!

Spread the love

ಬೆಂಗಳೂರು: ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬ ಆಯೋಜಿಸಲಾಗಿದೆ. ಸೋಮವಾರ ವಿಧಾನಸೌಧದಲ್ಲಿ ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಸಿದ್ದರಾಮೋತ್ಸವ ಆಚರಣೆಗೆ ಉಂಟಾಗುವ ಖರ್ಚು -ವೆಚ್ಚಗಳ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಅನೌಪಚಾರಿಕವಾಗಿ ಚರ್ಚಿಸಲಾಯಿತು.

 

ರಾಜ್ಯದ 13 ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಮೆಗಾ ರ್ಯಾಲಿಗೆ ಹಣವನ್ನು ಖರ್ಚು ಮಾಡಬೇಕು ಹಾಗೂ ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದರು ಎಂದು ಮೂಲಗಳು ತಿಳಿಸಿವೆ.

ಕಾರ್ಯಕ್ರಮದ ಆಯೋಜನಾ ಸಮಿತಿಯ ಗೌರವಾಧ್ಯಕ್ಷ ಆರ್.ವಿ.ದೇಶಪಾಂಡೆ, ಅಧ್ಯಕ್ಷ ಕೆ.ಎನ್.ರಾಜಣ್ಣ, ಬಸವರಾಜ ರಾಯರೆಡ್ಡಿ, ಅಶೋಕ್ ಪಟ್ಟಣ ಸೇರಿದಂತೆ ಇತರರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಇದರ ನಡುವೆ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಸಿದ್ದರಾಮಯ್ಯ, ಹಳೇ ಮೈಸೂರು ಭಾಗದಿಂದ ವಿಶೇಷವಾಗಿ ಮಂಡ್ಯದಿಂದ ಜನರನ್ನು ಒಟ್ಟುಗೂಡಿಸುವ ಬಗ್ಗೆ ಚರ್ಚಿಸಿದ್ದಾರೆ.

ಸಾಕಷ್ಟು ಕುರುಬ ಸಮುದಾಯದ ಜನರಿರುವ ಹಾವೇರಿ ಮತ್ತು ದಾವಣಗೆರೆಯ ಸುತ್ತಮುತ್ತಲಿನ ಜಿಲ್ಲೆಗಳ ಜನರು ಸಿದ್ದರಾಮಯ್ಯ ಉತ್ಸವದ ಬಗ್ಗೆ ಅಪಾರ ಉತ್ಸಾಹದಿಂದ ಇದ್ದಾರೆ ಎಂದು ವರದಿಯಾಗಿದೆ.

ಆದರೆ ಒಕ್ಕಲಿಗ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ಉತ್ಸಾಹದ ಕೊರತೆ ಎದ್ದು ಕಾಣುತ್ತಿದೆ. ಹುಟ್ಟು ಹಬ್ಬದ ಕಾರ್ಯಕ್ರಮದ ನಂತರ ಸುಮಾರು 40 ಟಿಕೆಟ್ ಆಕಾಂಕ್ಷಿಗಳನ್ನು ಸಿದ್ದರಾಮಯ್ಯ ಗುರುತಿಸಲಿದ್ದಾರೆ, ಈ ಕಾರ್ಯಕ್ರಮದ ಮೂಲಕ ಸಿದ್ದರಾಮಯ್ಯ ಅವರನ್ನು ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗುವುದು ಎಂದು ಮುಖಂಡರೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ