Breaking News

ಕಾಂಗ್ರೆಸ್‌ಗೆ ಇನ್ಮುಂದೆ ಎಂದಿಗೂ ಅಧಿಕಾರ ಸಿಗುವುದಿಲ್ಲ: ಹಾಲಪ್ಪ ಆಚಾರ್

Spread the love

ಕೊಪ್ಪಳ: ಕಾಂಗ್ರೆಸ್ ಈ ದೇಶದಲ್ಲಿ ಬಹು ವರ್ಷಗಳ ಕಾಲ ಅಧಿಕಾರ ಅನುಭವಿಸಿದ್ದಾರೆ. ಈಗ ಅಧಿಕಾರ ಕಳೆದುಕೊಂಡು ಸಿಎಂ ರೇಸ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಎಂದಿಗೂ ಅಧಿಕಾರ ಸಿಗುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ಹೇಳಿದರು.

 

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಈಚೆಗಿನ ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನೆಡೆ ಎಂದೆನ್ನುತ್ತಿದ್ದಾರೆ. ಈ ಹಿಂದೆಯೂ ಉತ್ತರ ಪ್ರದೇಶದಲ್ಲಿ ಹಿನ್ನಡೆಯಾಗಲಿದೆ ಎಂದು ಹೇಳಿದ್ದರು. ಆದರೆ ಫಲಿತಾಂಶ ಏನಾಯ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದರು.

ಬೆಲೆ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿ, ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ನೋಡುವುದಾದರೆ ಬೆಲೆ ಏರಿಕೆ ಇಂದು ಅನಿವಾರ್ಯವಾಗಿದೆ. ಕೆಲವೊಂದು ಸಂದರ್ಭದಲ್ಲಿ ಕಾಲ ಕಾಲಕ್ಕೆ ಏರಿಕೆ ಮಾಡಬೇಕಾಗುತ್ತದೆ. ಅಲ್ಲದೇ ಕೆಲವೊಂದು ವಸ್ತುಗಳ ಮೇಲೆ ವಿನಾಯತಿ ನೀಡಲಾಗಿದೆ. ಆದರೆ ಅದನ್ನು ಯಾರೂ ಪ್ರಚಾರ ಮಾಡುವುದಿಲ್ಲ ಎಂದರಲ್ಲದೇ, ಜು.21 ರಂದು ಕಾಂಗ್ರೆಸ್ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ಬಗ್ಗೆ ಪ್ರತಿಭಟನೆ ನಡೆಸಿರುವ ನಿರ್ಧಾರಿಸಿದ ವಿಚಾರ, ವಿರೋಧ ಪಕ್ಷವಾಗಿ ಅವರು ವಿರೋಧ ಮಾಡುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ