ಮೈಸೂರು: ಕಾಂಗ್ರೆಸ್ ಅಧ್ಯಕ್ಷನಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಡಿಕೆಶಿ ಅವರಿಗೆ ಪಕ್ಷದವರೇ ಬಿಡುತ್ತಿಲ್ಲ. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ತಿಕ್ಕಾಟ ಶುರುವಾಗಿದೆ. ಡಿಕೆಶಿ ನಾನೊಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ ಎನ್ನುತ್ತಿದ್ದಾರೆ.
ಅವರ ತಟ್ಟೆಯಲ್ಲಿ ಏನಿದೆ ಎನ್ನುವುದನ್ನು ಬಿಟ್ಟು ನಮ್ಮ ಬಗ್ಗೆ ಮಾತನಾಡಲು ಬರ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತಾನಾಡಿದ ಅವರು, ನಾಡಿನಲ್ಲಿ ಎಲ್ಲಾ ಕಡೆ ಉತ್ತಮ ಮಳೆಯಾಗುತ್ತಿದೆ. ಕಬಿನಿ, ಕಾವೇರಿ ಏಕಕಾಲಕ್ಕೆ ಭರ್ತಿ ಆಗುವುದು ಅಪರೂಪ. ಈ ಬಾರಿ ಒಟ್ಟಿಗೆ ಭರ್ತಿಯಾಗಿದೆ. ತಡ ಮಾಡದೆ ಎರಡೂ ಕಡೆ ಬಾಗಿನ ಸಮರ್ಪಿಸಬೇಕೆಂಬ ಕಾರಣಕ್ಕೆ ಬಂದಿದ್ದೇನೆ. ಕಬಿನಿ, ಕೆ.ಆರ್.ಎಸ್. ಗೆ ತೆರಳಿ ಬಾಗಿನ ರ್ಪಿಸುತ್ತೇನೆ ಎಂದರು.
Laxmi News 24×7