Breaking News

ಸ್ನಾನ ಮಾಡುವ ವಿಡಿಯೋ ತೆಗೆದು ಯುವಕನ ಬ್ಲ್ಯಾಕ​ ಮೇಲ್

Spread the love

ಮೈಸೂರು: ತಾನು ಸ್ನಾನ ಮಾಡುವ ವಿಡಿಯೋ ತೆಗೆದು ಯುವಕನೋರ್ವ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದು, ಈ ಯುವಕನನ್ನು ಬಂಧಿಸುವಂತೆ ನೊಂದ ಮಹಿಳೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ, ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ

ನಗರದ ನಿವಾಸಿಯಾದ ಈ ಮಹಿಳೆಯು  MEDIA ಜೊತೆ ಮಾತನಾಡಿ, ನಾನು ಸ್ನಾನ ಮಾಡುವ ವಿಡಿಯೋವನ್ನು ಪ್ರಮೋದ್ ಎಂಬ ಯುವಕ ತೆಗೆದಿದ್ದಾನೆ. ಕಳೆದ ಒಂದೂವರೆ ವರ್ಷದಿಂದ ನನ್ನನ್ನು ಎಲ್ಲ ರೀತಿಯಲ್ಲೂ ಬ್ಲ್ಯಾಕ್​ಮೇಲ್​ ಮಾಡಿದ್ದ. ಈ ವಿಚಾರ ನನ್ನ ಗಂಡನಿಗೆ ಗೊತ್ತಾದರೆ ತೊಂದರೆಯಾಗುತ್ತದೆ ಎಂದು ಸುಮ್ಮನಿದ್ದೆ. ಆದರೆ, ಒಂದು ತಿಂಗಳ ಹಿಂದೆ ವಿಪರೀತ ಕಾಟ ಕೊಡಲು​ ಶುರು ಮಾಡಿದ್ದಾನೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ.

Thumbnail image

 

ನಮ್ಮ ಮುಂದಿನ ಮನೆಯವನಾದ ಈ ಆರೋಪಿಯು ನನ್ನ ಗಂಡನ ಸ್ನೇಹಿತನಾಗಿದ್ದು, ಅಕ್ಕ.. ಅಕ್ಕ.. ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದ. ಈ ಸಂದರ್ಭದಲ್ಲಿ ನಾನು ಸ್ನಾನ ಮಾಡುವುದನ್ನು ಗುಪ್ತವಾಗಿ ವಿಡಿಯೋವನ್ನು ತೆಗೆದಿದ್ದಾನೆ. ಅಲ್ಲದೇ, ಬ್ಲ್ಯಾಕ್​ಮೇಲ್ ಮಾಡುತ್ತಿರುವ ಬಗ್ಗೆ ಮೈಸೂರಿನ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಕೂಡಲೇ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

 


Spread the love

About Laxminews 24x7

Check Also

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ