ಬೆಂಗಳೂರು: ತಮ್ಮನ್ನು ಪಕ್ಷವು ಮೂಲೆಗುಂಪು ಮಾಡುತ್ತಿದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದ
ರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಯಡಿಯೂರಪ್ಪ, “ಕಾಂಗ್ರೆಸ್ ನಾಯಕರು ಆತುರಾತುರವಾಗಿ ಮತ್ತು ಮುಖ್ಯಮಂತ್ರಿಯಾಗಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ನಾವು ಹಾಗೆ ಆಗಲು ಬಿಡುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ” ಎಂದು ಅವರು ಹೇಳಿದರು.