Breaking News

ದೇಹಲಿ ಭೇಟಿ ಬಳಿಕ ನಿಗಮ, ಮಂಡಳಿ ನೇಮಕ: ಸಿ.ಎಂ

Spread the love

ಮಂಡ್ಯ: ‘ದೆಹಲಿಗೆ ಭೇಟಿ ನೀಡಿದ ನಂತರ ನಿಗಮ, ಮಂಡಳಿ ನೇಮಕಾತಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಮಂತ್ರಿಮಂಡಲಕ್ಕೆ ಸೇರ್ಪಡೆ ವಿಚಾರವನ್ನೂ ಪಕ್ಷದ ವರಿಷ್ಠರ ಜೊತೆ ಚರ್ಚಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.

 

ಕೆ.ಆರ್‌.ಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಶೀಘ್ರದಲ್ಲೇ ದೆಹಲಿಗೆ ಭೇಟಿ ನೀಡಲಿದ್ದು ನೇಮಕಾತಿ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ, ಮಂಡಳಿಗೆ ನೇಮಕಾತಿ ಕುರಿತಂತೆ ಇಲ್ಲಿಯವರೆಗೂ ಯಾವುದೇ ಚರ್ಚೆ ನಡೆಸಿಲ್ಲ’ ಎಂದರು.

ಕೆ.ಎಸ್‌.ಈಶ್ವರಪ್ಪ ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವರೇ ಎಂಬ ಪ್ರಶ್ನೆಗೆ ‘ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣ ಅಂತಿಮ ಹಂತಕ್ಕೆ ಬಂದ ನಂತರ ಆ ಬಗ್ಗೆ ಚರ್ಚೆ ನಡೆಸಲಾಗುವುದು’ ಎಂದರು.

ಸಿ.ಎಂ ಕುರ್ಚಿಗಾಗಿ ಪೈಪೋಟಿ: ‘ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಸಿ.ಎಂ ಕುರ್ಚಿಗಾಗಿ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿಯಾಗಲು ಅವಕಾಶ ಕೊಡಿ ಎಂದು ಮೊದಲಿನಿಂದಲೂ ಎಚ್‌.ಡಿ.ಕುಮಾರಸ್ವಾಮಿ ಕೇಳುತ್ತಿದ್ದಾರೆ. ಈ ಬಾರಿ ತನಗೆ ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್‌ ಅವರೂ ಕೇಳುತ್ತಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿ ಮಾಡಿ ಎಂದು ಸಿದ್ದರಾಮಯ್ಯ ಕೇಳುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ