Breaking News

ನನಗೂ ಸಿಎಂ ಆಗಬೇಕೆಂಬ ಆಸೆ ಇದೆ.: ಜಮೀರ್ ಅಹ್ಮದ್

Spread the love

ರಾಜ್ಯ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‌ ಹೇಳಿದ್ದಾರೆ.

ನಗರದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ.ನಾವು ಯಾರು ತೀರ್ಮಾನ ಮಾಡಕ್ಕಾಗಲ್ಲ.ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನನ್ನ ಅಭಿಪ್ರಾಯ ಹೇಳೋದು ತಪ್ಪೇನಿಲ್ಲಲ್ಲ.ನಮ್ಮ ಸಂವಿಧಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು,

ಯಾರೇ ಇದ್ರು ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಇದನ್ನ ಚಾಲನೆ ಯಾರು ಕೊಟ್ಟಿದ್ದು?, ಅವರು ಹೇಳಿದ್ಮೇಲೆ ತಾನೇ ಬಂದಿದ್ದು. ಅಧ್ಯಕ್ಷರು ನಮ್ಮ ಒಕ್ಕಲಿಗ ಸಮಾಜ ಕಾರ್ಯಕ್ರಮದಲ್ಲಿ ಅವರಾಗಿ ಅವರು ನನಗೆ ಮುಂದೆ ಅವಕಾಶ ಕೊಡಿ ಎಂದು ಚಾಲನೆ ಕೊಟ್ಟಿದ್ದಾರೆ. ಕೇಳಿದ್ದು ಅವರೇ ತಾನೇ?

ಎಂದು ಡಿಕೆಶಿಗೆ ಜಮೀರ್ ಅಹ್ಮದ್ ಪ್ರಶ್ನೆ ಮಾಡಿದ್ದಾರೆ. ಅವರು ಹೇಳಿದ ಮೇಲೆ ನಾವು ಹೇಳಿದ್ದು ಅದಕ್ಕಿಂತ ಮುಂಚೆ ಯಾರು ಹೇಳಿಲ್ಲ.ಎಲ್ಲರೂ ಕ್ಲೇಮ್ ಮಾಡೋದು ಸಹಜ. ಎಲ್ಲರಿಗೂ ಆಸೆ ಇರುತ್ತದೆ. ಬಹಳ ಜನರಿಗೆ ಆಸೆ ಇದೆ.ಆಸೆ ಇರೋದ್ರಲ್ಲಿ ತಪ್ಪೇನಿಲ್ಲ. ಮೊನ್ನೆ ನಾನು ಹೇಳಿದೀನಿ ಮುಸ್ಲಿಂರಿಗೂ ಅವಕಾಶ ಸಿಗಬೇಕು

. ನನಗೂ ಸಿಎಂ ಆಗಬೇಕೆಂಬ ಆಸೆ ಇದೆ.ನಾವು ಜನಸಂಖ್ಯೆಯನುಸಾರ ಶೇಕಡಾ 15ರಷ್ಟು ಇದ್ದೇವೆ ಎಂದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ