Breaking News

ಸ್ಪಾರ್ಕರ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ

Spread the love

ಹುಬ್ಬಳ್ಳಿ (ಜು.23): ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ (Explosion ) ಸಂಭವಿಸಿದ ಪರಿಣಾಮ 8 ಜನ ಗಾಯಗೊಂಡ ಘಟನೆ ಹುಬ್ಬಳ್ಳಿ ಹೊರಲವಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಡೆದಿದೆ. ಸ್ಪಾರ್ಕರ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ (Sparker Candle Factory) ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟಕ್ಕೆ ಕಾರಣವಾಗಿದೆ. ಗಾಯಾಳುಗಳ (Injured) ಪೈಕಿ ಮುವ್ವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಬ್ಬಳ್ಳಿ ಹೊರವಲಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಯಾವುದೇ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಆರಂಭಿಸಿರೋ ಕಾರ್ಖಾನೆಯಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಬರ್ತ್ ಡೇ ಕ್ಯಾಂಡಲ್ ರೂಪದಲ್ಲಿ ಬಳಸುವ ಸ್ಪಾರ್ಕರ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಕಾರ್ಖಾನೆಯ ಒಳಗೆ ಕೆಲಸ ಮಾಡ್ತಿದ್ದ ಎಲ್ಲ ಎಂಟು ಜನ ಕಾರ್ಮಿಕರೂ ಗಾಯಗೊಂಡಿದ್ದಾರೆ. ಮುವ್ವರಿಗೆ ಶೇ. 80 ರಷ್ಟು ದೇಹ ಸುಟ್ಟು ಹೋಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಗೌರಮ್ಮ, ವಿಜಯಲಕ್ಷ್ಮಿ ಹಾಗೂ ಮಾಲೇಶ್ ಎಂದು ಗುರುತಿಸಲಾಗಿದೆ.


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ