Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.

ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.

Spread the love

ಬೆಳಗಾವಿ – ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಿಆರ್ ಪಿಎಫ್ ಯೋಧನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಠಾಣೆಯ ಪಿಎಸ್ಐ ಅನೀಲ ಕಂಬಾರ್ ಅವರನ್ನು ಅಮಾನತುಗೊಳಿಸಲಾಗಿದೆ.

ಸಿಆರ್ ಪಿಎಫ್ ಯೋಧ ಸಚಿನ್ ಸಾವಂತ ಮಾಸ್ಕ್ ಧರಿಸಿರಲಿಲ್ಲ ಎನ್ನುವ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಮಾರಾಮಾರಿ ಹಂತಕ್ಕೆ ಹೋಗಿತ್ತು. ನಂತರ ಯೋಧನನ್ನು ಅಮಾನವೀಯವಾಗಿ ಠಾಣೆಗೆ ಕರೆದೊಯ್ದು ಹಿಂಸಿಸಲಾಗಿದೆ ಎಂದು ಆರೋಪಿಸಲಾಗಿತ್ತು.

ಯೋಧನಿಗೆ ಕೊಳ ತೊಡಿಸಿ ಕೂಡ್ರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಯೋಧನ ಮೈಮೇಲೆ ಬಾಸುಂಡೆ ಏಳುವಂತೆ ಹೊಡೆದಿರುವ ಫೋಟೋಗಳು ಕೂಡ ವೈರಲ್ ಆಗಿವೆ.

ಈ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದಲ್ಲದೆ ಪ್ರಕರಣದ ತನಿಖೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶಿಸಿದ್ದರು. ಬೆಳಗಾವಿ ಐಜಿಯಿಂದ ತನಿಖೆಗೆ ಆದೇಶಿಸಲಾಗಿದೆ.

ತನಿಖೆ ಮುಂದುವರಿದಿದ್ದು, ಪಿಎಸ್ಐ ಅನಿಲ ಕಂಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.

ಪೊಲೀಸ್ ಮತ್ತು ಸಿಆರ್ ಪಿಎಫ್ ಯೋಧ ಇಬ್ಬರ ನಡುವೆ ನಡೆದ ಪ್ರಕರಣ ಕುರಿತು ಎರಡೂ ಇಲಾಖೆಗಳು ತಮ್ಮನ್ನು ಸಮರ್ಥಿಸಿಕೊಳ್ಳುತ್ತಿವೆ. ತನಿಖೆಯ ನಂತರ ನಿಜಾಂಶ ಹೊರಬರಬೇಕಿದೆ


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ