ವಿಜಯಪುರ ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ 1 ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ವಿಕಲಚೇತನ ಇಲಾಖೆಯಿಂದ 10 ಜನ ಅಂಗವಿಕಲರಿಗೆ ತ್ರೀ ಚಕ್ರ ಸೈಕಲ್ ವಿತರಣೆ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ಹಾಗೂ ಚೆಕ್ ವಿತರಿಸಲಾಯಿತು.
ಹರ್ ಘರ್ ತಿರಂಗಾ ಪ್ರಚಾರದ ಪೋಸ್ಟರ್ ಬಿಡುಗಡೆ ಬಿಡುಗಡೆ ಮಾಡಲಾಯಿತು.
ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಯಶವಂತರಾಗೌಡ ಪಾಟೀಲ್, ದೇವಾನಂದ ಚವ್ಹಾಣ, ಶಿವಾನಂದ ಪಾಟೀಲ್, ರಮೇಶ ಭೂಸನೂರ, ಸೋಮನಗೌಡ ಪಾಟೀಲ್, ಎಂಎಲ್ ಸಿ ಸುನೀಲಗೌಡ ಪಾಟೀಲ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
Laxmi News 24×7