Breaking News

ಹೈ ಪ್ರೊಫೈಲ್ ಸೆಕ್ಸ್ ರಾಕೆಟ್: ಬೆಂಗಳೂರಿನ ಯುವತಿಯರು ಸಹಿತ 11 ಮಂದಿ ಅರೆಸ್ಟ್

Spread the love

ಛತ್ತೀಸಗಢದ ರಾಯ್ಪುರದ ಸ್ಟಾರ್​ ಹೋಟೆಲ್​ ಮೇಲೆ ದಾಳಿ ನಡೆಸಿದ್ದು, ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕದ ಸಿಬ್ಬಂದಿ ಹೈ ಪ್ರೊಫೈಲ್​ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ.

 

ಈ ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಯುವತಿ ಸೇರಿದಂತೆ 11 ಮಂದಿ ಯುವತಿಯರು ಹಾಗೂ ಒಬ್ಬ ಕಿಂಗ್​ಪಿನ್​ನನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಯುವತಿ ಹೊರತುಪಡಿಸಿ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮೂಲದವರು ಎಂದು ತಿಳಿದುಬಂದಿದೆ.

ಇನ್ನು ಇವರ ಸ್ಮಾರ್ಟ್​ಫೋನ್​ಗಳನ್ನು ತನಿಖೆಗೆ ಒಳಪಡಿಸಿದಾಗ ಬೆಂಗಳೂರಿನ ಯುವತಿ ಸೇರಿದಂತೆ ಬಹುತೇಕ ಯುವತಿಯರ ಫೋನ್​ನಲ್ಲಿ ದೊಡ್ಡ ದೊಡ್ಡ ರಾಜಕಾರಣಿಗಳ ಹೆಸರು ಸೇವ್​ ಆಗಿದ್ದು, ಅವರಿಗೆ ಈ ಯುವತಿಯರು ಕರೆ ಮಾಡಿರುವುದು ತಿಳಿದುಬಂದಿದೆ. ಆದರೆ ಸದ್ಯ ತನಿಖೆಯ ಹಂತದಲ್ಲಿರುವ ಕಾರಣ, ಯಾರ ಹೆಸರನ್ನೂ ಪೊಲೀಸರು ಬಹಿರಂಗಪಡಿಸಲಿಲ್ಲ.

ಹೋಟೆಲ್​​ನಲ್ಲಿ ಸೆಕ್ಸ್​ ದಂಧೆ ನಡೆಯುತ್ತಿದ್ದ ಬಗ್ಗೆ ರಾಯ್ಪುರ್​​ ಪೊಲೀಸ್​ ಅಪರಾಧ ನಿಗ್ರಹ ಮತ್ತು ಸೈಬರ್ ಘಟಕಕ್ಕೆ ದೂರು ನೀಡಲಾಗಿತ್ತು.

ಇದಕ್ಕೋಸ್ಕರ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಎಸ್​​​ಎಸ್​ಪಿ ಅಭಿಷೇಕ್​​ ಮಹೇಶ್ವರಿ ಅವರ ಸೂಚನೆಯಂತೆ ಹೋಟೆಲ್​ಗೆ ವಿಶೇಷ ತಂಡ ಲಗ್ಗೆಹಾಕಿತ್ತು. ಈ ವೇಳೆ, ದಂಧೆ ನಡೆಯುತ್ತಿರುವುದು ಕಂಡು ಬಂದಿದೆ. ಕಾರ್ಯಪ್ರವೃತ್ತರಾದ ಪೊಲೀಸರು ಅಪರಾಧಿಗಳ ಬಂಧನ ಮಾಡಿದ್ದಾರೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ