Breaking News

ಸಾರ್ವಜನಿಕರ ಟೀಕೆ, ಮಹಾನಗರ ಪಾಲಿಕೆ ಅಧಿಕಾರಿಗಳು ಆರ್‍ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.

Spread the love

ಸಾರ್ವಜನಿಕರ ಟೀಕೆ, ಆಗ್ರಹದಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿಯ ಮಹಾನಗರ ಪಾಲಿಕೆ ಅಧಿಕಾರಿಗಳು ಆರ್‍ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.

ಹೌದು ಕಳೆದ 15 ದಿನಗಳ ಹಿಂದೆ ಆರ್‍ಪಿಡಿ ಕ್ರಾಸ್ ಬಳಿಯ ಡ್ರೈನೇಜ್ ಪೈಪ್ ಲೀಕ್ ಆಗಿ ರಸ್ತೆಯ ಮೇಲೆ ಕಲುಷಿತ ನೀರು ಹರಿಯುತ್ತಿತ್ತು. ಈ ಸಂದರ್ಭದಲ್ಲಿ ಮೊದಲೇ ದೊಡ್ಡ ಪ್ರಮಾಣದಲ್ಲಿ ಮಳೆಯಾಗುತ್ತಿತ್ತು. ಇದರಿಂದ ಮಳೆ ನೀರಿನ ಜೊತೆಗೆ ಡ್ರೈನೇಜ್ ನೀರು ಕೂಡ ರಸ್ತೆಯ ಮೇಲೆ ಹರಿಯುತ್ತಿತ್ತು.

ಈ ಬಗ್ಗೆ ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.ಇದರಿಂದ ಎಚ್ಚೆತ್ತುಕೊಂಡಿರುವ ಪಾಲಿಕೆ ಅಧಿಕಾರಿಗಳು ಮಂಗಳವಾರ ಕಾಮಗಾರಿ ಆರಂಭಿಸಿದ್ದಾರೆ. ದುರಸ್ಥಿ ಕಾಮಗಾರಿ ಕೈಗೊಂಡಿದ್ದಾರೆ. ಆದಷ್ಟು ಬೇಗನೇ ಪೂರ್ಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಟ್ಟರೆ ಅಷ್ಟೇ ಸಾಕು.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ