ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ ಅಕ್ರೋಶ ಹೊರಹಾಕಿದೆ.
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರು ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿಲು ಮುಂದಾಗಿದ್ದಾರೆ.
Laxmi News 24×7