Breaking News
Home / ರಾಜಕೀಯ / ಬಿಜೆಪಿ ಸಾಧನಾ ಸಮಾವೇಶ ರದ್ದು, ರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದ: C.M.

ಬಿಜೆಪಿ ಸಾಧನಾ ಸಮಾವೇಶ ರದ್ದು, ರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದ: C.M.

Spread the love

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು​ ಹತ್ಯೆಯಾಗಿರುವ ಈ ಸಂದರ್ಭದಲ್ಲಿ ಸಾಧನಾ ಸಮಾವೇಶ ಮಾಡಲು ನನ್ನ ಮನಸಾಕ್ಷಿ ಒಪ್ಪಲಿಲ್ಲ. ಹಾಗಾಗಿ, ‘ಜನೋತ್ಸವ ಕಾರ್ಯಕ್ರಮ’ವನ್ನು ರದ್ದು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್.ಟಿ.ನಗರ ನಿವಾಸದಲ್ಲಿ ಸರಿರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಒಂದೆಡೆ ನಮ್ಮ ಯುವ ಕಾರ್ಯಕರ್ತನ ಕೊಲೆಯಾಗಿದೆ. ಇದೇ ವೇಳೆ ನಮ್ಮ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದೆ. ಯಡಿಯೂರಪ್ಪನವರು ತಂದಿರುವ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿದೆ. ಹಲವು ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ರಾಜ್ಯದ ಜನರಿಗೆ ಕೊಡಬೇಕೆನ್ನುವ ಹಂಬಲ ನಮ್ಮದು. ಇದೇ ಕಾರಣಕ್ಕೆ ಉತ್ಸವಕ್ಕಿಂತ ಜನೋತ್ಸವ ಮಾಡಲು ಉದ್ದೇಶಿಸಿದ್ದೆವು. ಜನಪರವಾಗಿ ನಾವೇನು ಕೆಲಸ ಮಾಡಿದ್ದೇವೆ ಎನ್ನುವುದನ್ನು ಜನರಿಗೆ ತಿಳಿಸಬೇಕಿತ್ತು. ಸಂಭ್ರಮಿಸಲು ಅಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದರು.

ಹತ್ಯೆಯಾದ ಆ ಹುಡುಗನ ತಾಯಿಯ ಆಕ್ರಂದನ, ಪತ್ನಿಯ ಆಕ್ರಂದನ ಹಾಗೂ ಹರ್ಷನ ತಾಯಿಯ ನೋವನ್ನ ನೋಡಿ ಈ ಸಂದರ್ಭದಲ್ಲಿ ನಾವು ಯಾವುದೇ ರೀತಿಯ ಕಾರ್ಯಕ್ರಮ ಮಾಡುವುದು ಸೂಕ್ತವಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇವೆ. ಹೀಗಾಗಿ, ದೊಡ್ಡಬಳ್ಳಾಪುರದ ಕಾರ್ಯಕ್ರಮವನ್ನು ನಾನು ರದ್ದು ಮಾಡಿದ್ದೇನೆ, ನಮ್ಮ ಪಕ್ಷವೂ ಕಾರ್ಯಕ್ರಮ ರದ್ದು ಮಾಡಿದೆ ಮತ್ತು ವಿಧಾನಸೌಧದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮವನ್ನು ಕೂಡ ರದ್ದು ಮಾಡಿದ್ದೇವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ