Breaking News

ಬೆಳಗಾವಿ ನಗರದಲ್ಲಿ ಮಹಿಳಾ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರ ಬಂಧನ

Spread the love

ಬೆಳಗಾವಿ: ತಾಲೂಕಿನ ಹಿಂಡಲಗಾ-ಸುಳಗಾ ರೋಡ್​ನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಮಹಿಳಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ನಗರದಲ್ಲಿ ಮಹಿಳಾ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಗರದ ಹಿಂಡಲಗಾ – ಸುಳಗಾ ರೋಡನಲ್ಲಿರುವ ಅಂಬಿಕಾ ಲಾಡ್ಡ್ & ಬೋರ್ಡಿಂಗ್​ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 4 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಹಿಳಾ ಪೊಲೀಸ್ ಠಾಣೆಯ ಪಿಐ ಶ್ರೀದೇವಿ ಪಾಟೀಲ ನೇತೃತ್ವದಲ್ಲಿನ ತಂಡದ ಸಿಬ್ಬಂದಿ ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ.

ಈ ವೇಳೆ ಅಲ್ಲಿದ್ದ ಮಹಿಳೆಯರನ್ನು ರಕ್ಷಿಸಿದ್ದಾರೆ. ಬಳಿಕ ನಗರದ ಗೌಳ್ಳಿ ಗಲ್ಲಿಯ ಸೋಮನಾಥ್ ಗೌಳಿ, ಕಂಗ್ರಾಳಿ ಕೆ. ಹೆಚ್ ಗ್ರಾಮದ ರಾಹುಲ್ ಪಾಟೀಲ, ಮಯೂರ್ ಪಾಟೀಲ, ಮಾರಿಹಾಳ ಗ್ರಾಮದ ರಮೇಶ ತಾರಿಹಾಳ ಬಂಧಿತ ಆರೋಪಿಗಳು. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮಹಿಳಾ ಠಾಣೆಯ ಪಿಐ ಶ್ರೀದೇವಿ ಮತ್ತವರ ತಂಡದ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಪೊಲೀಸ್ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ