Breaking News

ಹಲ್ಲಿ ಬಿದ್ದಿರುವ ಶಂಕೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥ

Spread the love

ಕಲಬುರಗಿ: ಹಲ್ಲಿ ಬಿದ್ದಿರುವ ವಿಷ ಆಹಾರ ಸೇವಿಸಿ 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎನ್ನಲಾಗ್ತಿದೆ. ಅದೇ ಆಹಾರವನ್ನು ಮಕ್ಕಳು ಸೇವಿಸಿದ ಪರಿಣಾಮ‌ ಮಕ್ಕಳು ಅಸ್ವಸ್ಥಗೊಂಡಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆಹಾರ‌ ಸೇವಿಸಿದ ಸ್ವಲ್ವ ಸಮಯದ ನಂತರ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಆಗ ತಕ್ಷಣ ಅವರನ್ನು ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.

10 ಕ್ಕೂ ಹೆಚ್ಚು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಮಕ್ಕಳಿಗೆ ಗ್ಲೂಕೋಸ್‌ ಹಾಕಿ ಚಿಕಿತ್ಸೆ ನೀಡಲಾಗುತ್ತಿದೆ. ಅಡುಗೆ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಘಟನೆ‌ ನಡೆದಿದೆ. ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ