Breaking News

ವಿವಿಧ ಬೇಡಿಕೆ ಈಡೇರಿಸುವಂತೆ ಬೆಳಗಾವಿಯಲ್ಲಿ ಕೂಲಿ ಕಾರ್ಮಿಕ ಪ್ರತಿಭಟನೆ

Spread the love

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕಾರ್ಮಿಕ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಗುರುವಾರ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು 2021ರ ಫೆಬ್ರುವರಿ, ಮಾರ್ಚ ಹಾಗೂ 2022ರ ಏಪ್ರೀಲ್, ಮೇ, ಜೂನ್ ತಿಂಗಳ ಕೂಲಿ ಹಣ ಈವರೆಗೂ ಬಿಡುಗಡೆ ಆಗಿಲ್ಲ. ತಕ್ಷಣವೇ ಈ ಕೂಲಿ ಹಣ ಬಿಡುಗಡೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕಾರ್ಮಿಕ ಮುಖಂಡ ವಿಶ್ವೇಶ್ವರಯ್ಯ ಹಿರೇಮಠ ಮಾತನಾಡಿ ನಾವು ಕೆಲಸ ಮಾಡುತ್ತಿದ್ದ ವೇಳೆ ಸಲಕಿ, ಬುಟ್ಟಿ, ಗುದ್ದಲಿಯನ್ನು ತೆಗೆದುಕೊಂಡು ಬರುತ್ತಿದ್ದೇವು. ಇವುಗಳಿಗೆ ಸವಕಳಿ ಎಂದು ಪ್ರತಿದಿನ ಹತ್ತು ರೂಪಾಯಿ ಬಾಡಿಗೆ ಕೊಡುತ್ತಿದ್ದರು. ಆದರೆ ಜೂನ್ ತಿಂಗಳಿನಿಂದ ಇದನ್ನು ನಿಲ್ಲಿಸಿದ್ದಾರೆ. ತಕ್ಷಣವೇ 10 ರೂಪಾಯಿ ಬದಲು 25 ರೂಪಾಯಿ ಕೂಲಿ ಪಾವತಿ ಜೊತೆಗೆ ಹೆಚ್ಚುವರಿಯಾಗಿ ಸಲಕರಣೆ ವೆಚ್ಛವನ್ನು ಹಾಕಿ ಕೊಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ