Breaking News

ಅಸಮರ್ಥ ಗೃಹಸಚಿವ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲ:ಸಿದ್ದರಾಮಯ್ಯ

Spread the love

ಬೆಂಗಳೂರು : ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

 

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ.

 

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ