Breaking News

ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಆಟವಾಡಿ ವಿನೂತನ ಪ್ರತಿಭಟನೆ

Spread the love

ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಬೇಕಿದ್ದ ನೆಹರು ಮೈದಾನ ಈವರೆಗೆ ಅಭಿವೃದ್ಧಿ ಕಾಣದೇ ಯುವಕರು ಕ್ರೀಡಾಚಟುವಟಿಗಳಿಂದ ದೂರ ಉಳಿಯುವ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ನೆಹರು ಮೈದಾನದ ಕೆಲಸ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಬ್ಯಾಟ್, ಬಾಲ್ ಹಿಡಿದು ವಿನೂತನ ಪ್ರತಿಭಟನೆ ಮಾಡಿದರು.

ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಪ್ರಾಕ್ಟೀಸ್ ಮಾಡುವುದಕ್ಕೆ ನೆಹರು ಮೈದಾನ ಕೇಂದ್ರ ಸ್ಥಳವಾಗಿದೆ‌. ಕಳೆದ ಎರಡು ವರ್ಷಗಳಿಂದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮೈದಾನವನ್ನು ಮೇಲ್ದರ್ಜೆಗೆ ಏರಿಸಲು ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಆದರೆ ಈವರೆಗೆ ಮಾತ್ರ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ರಾಜೇಶ ಗಾಂವಕರ, ಬಸವರಾಜ ತೇರದಾಳ, ಶಿವಾನಂದ ಅಣವೇಕರ, ರಾಜು ಕೋರ್ಯನಮಠ, ವಿಷ್ಣು ಮಿಸ್ಕಿನ್ ಸೇರಿದಂತೆ ಮುಂತಾದವರು ಭಾಗಿಯಾಗಿದ್ದರು


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ