Breaking News

ಪ್ರವೀಣ್​ ಹತ್ಯೆ ಪ್ರಕರಣ ಎನ್​ಐಎ ತನಿಖೆಗೆ ವಹಿಸಲು ಸರ್ಕಾರದ ನಿರ್ಧಾರ

Spread the love

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​​ಐಎ)ಕ್ಕೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಕುರಿತಂತೆ ಡಿಜಿ-ಐಜಿ ಜೊತೆಗೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಸಂಘಟಿತ ಅಪರಾಧವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಈ ಪ್ರಕರಣವು ಅಂತಾರಾಜ್ಯ ವಿಚಾರವಾಗಿದೆ. ಇದರ ಸಂಪೂರ್ಣವಾದ ಮಾಹಿತಿಯನ್ನೂ ಸಂಗ್ರಹಿಸಲು ಹೇಳಿದ್ದೇನೆ. ತನಿಖೆ ಪ್ರಗತಿಯಲ್ಲಿದ್ದು, ಎಲ್ಲ ಮಾಹಿತಿ ಪಡೆದ ಮೇಲೆ ಎನ್​​ಐಎಗೆ ಪತ್ರ ಬರೆಯುಲು ತಿಳಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ದಕಗೆ ಕೆಎಸ್ಆರ್​​ಪಿಯ ಇನ್ನೊಂದು ಬೆಟಾಲಿಯನ್​ ಸ್ಥಳಾಂತರ: ಕೇರಳ ಬಾರ್ಡರ್​​​ನಲ್ಲಿ​ ಸಂಪೂರ್ಣವಾಗಿ ಸಿಸಿಟಿವಿ ಮೂಲಕ ಕಣ್ಗಾವಲು ವಹಿಸಲಾಗುವುದು. ಎರಡು ರಾಜ್ಯಗಳ ಸಂಪರ್ಕ ಇರುವ ಕಡೆ ಚೆಕ್​ ಪೋಸ್ಟ್ ಹಾಕಬೇಕು. ಸೂಕ್ಷ್ಮ ಊರುಗಳಲ್ಲಿ ಪೊಲೀಸರು ತಾತ್ಕಾಲಿಕ ಕ್ಯಾಂಪ್ ಮಾಡಬೇಕು. ಜೊತೆಗೆ ರಾತ್ರಿ ಗಸ್ತು ಹೆಚ್ಚಳ ಸೇರಿದಂತೆ ಹಲವು ಕ್ರಮಗಳಿಗೆ ಪೊಲೀಸ್​ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ