Breaking News

ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ.. ಆರೋಗ್ಯ ಇಲಾಖೆಗೆ ಬೆಳಗಾವಿ ಡಿಹೆಚ್‌ಒ ಪತ್ರ

Spread the love

ಬೆಳಗಾವಿ : ಡಿಹೆಚ್‌ಒಗೆ ‘ಕೈ’ ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ ಹಿನ್ನೆಲೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ ಪತ್ರ ಬರೆದಿದ್ದಾರೆ. ತಮ್ಮದೇನೂ ತಪ್ಪು ಇಲ್ಲದೇ ಇದ್ದರೂ ಜನಪ್ರತಿನಿಧಿಗಳು ತಮಗೆ ಕರೆ ಮಾಡಿ ತರಾಟೆಗೆ ತಗೆದುಕೊಳ್ಳುತ್ತಿದ್ದಾರೆ ಎಂದು ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

belgaum-dho-mahesh-koni-wrote-letter-to-health-dept-against-mls-anjali-nimbalkar

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ತಾಲೂಕು ಆಸ್ಪತ್ರೆಯಿಂದ ಬೆಳಗಾವಿಯ ಬಿಮ್ಸ್‌ಗೆ ನಿಯೋಜನೆಗೊಂಡ ತಜ್ಞ ವೈದ್ಯರು ಹಾಗೂ ಇತರ ಸಿಬ್ಬಂದಿ ಪಟ್ಟಿ ಸಮೇತ ಪತ್ರ ಬರೆದಿದ್ದಾರೆ. ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಅವರ ಪತ್ರಗಳ ಹಾಗೂ ಮೌಖಿಕ ಆದೇಶಗಳ ಅನ್ವಯ ವೈದ್ಯರು ಹಾಗೂ ಸಿಬ್ಬಂದಿಯನ್ನು ಬಿಮ್ಸ್ ಗೆ ನಿಯೋಜಿಸಲಾಗಿದೆ ಎಂದು ಡಾ. ಮಹೇಶ್ ಕೋಣಿ ಉಲ್ಲೇಖಿಸಿದ್ದಾರೆ.

belgaum-dho-mahesh-koni-wrote-letter-to-health-dept-against-mls-anjali-nimbalkar


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ