Breaking News

ಸತೀಶ ಜಾರಕಿಹೊಳಿ ಅಭಿಮಾನಿ ಯಮಕನಮರಡಿಯಿಂದ ಸಿದ್ದರಾಮಯ್ಯ ಹುಟ್ಟು ಹಬ್ಬಕ್ಕೆ ಬೈಕ್ ಮೂಲಕ ಪ್ರಯಾಣ

Spread the love

ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗಲು ಯಮಕನಮರಡಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮಾನಿ ಓರ್ವ ಬೈಕ್ ಮೂಲಕ ಪ್ರಯಾಣ ಆರಂಭಿಸಿದ್ದಾರೆ.

ಹೌದು ಯಮಕನಮರಡಿಯ ಕಾಂಗ್ರೆಸ್ ಕಾರ್ಯಕರ್ತ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸತೀಶ ಜಾರಕಿಹೊಳಿ ಅವರ ಅಪ್ಪಟ ಅಭಿಮಾನಿ ಆಗಿರುವ ಅರುಣ ರಾವಳ ಯಮಕನಮರಡಿಯಿಂದ ಬೈಕ್ ಮೂಲಕ ದಾವಣಗೆರೆಗೆ ಪ್ರಯಾಣ ಬೆಳೆಸಿದ್ದಾನೆ. ಕಡೋಲಿ ಗ್ರಾ.ಪಂ. ಮುಂದೆ ಆಗಮಿಸಿದ ಅರುಣ ರಾವಳಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಲಾರ್ಪಣೆ ಮಾಡಿ ಅದ್ಧೂರಿಯಾಗಿ ಬರಮಾಡಿಕೊಂಡರು. ತನ್ನ ಸ್ಕೂಟಿ ಸುತ್ತಲೂ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಬೋರ್ಡ ಹಾಕಿರುವ ಈ ಅಭಿಮಾನಿ ಎಲ್ಲರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಾ ಜಾಗೃತಿ ಮೂಡಿಸುತ್ತಿದ್ದಾನೆ.

ಈ ವೇಳೆ ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಅರುಣ ಕಟಾಂಬಳೆ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಗೌಡಪ್ಪಾ ಪಾಟೀಲ ಮಾತನಾಡಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅರುಣ ರಾವಳ ಬೈಕ್‍ನಲ್ಲಿ ಹೋಗುತ್ತಿದ್ದಾರೆ. ನಿಜಕ್ಕೂ ನಮಗೆ ಇದು ಅತೀವ ಸಂತಸ ತಂದಿದೆ. ಈ ಭಾಗದ ಅತೀ ಹೆಚ್ಚು ಜನರು ಸಿದ್ದರಾಮಯ್ಯರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ ಎಂದರು.

ಈ ವೇಳೆ ಮಾತನಾಡಿದ ಬೈಕ್ ಮೇಲೆ ಹೋಗುತ್ತಿರುವ ಅಭಿಮಾನಿ ಅರುಣ ರಾವಳ ಯಮಕನಮರಡಿ ಕ್ಷೇತ್ರದ ತುಂಬ ಸಂಚರಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಕಾರ್ಯಕ್ರಮ ಕುರಿತು ಜಾಗೃತಿ ಮೂಡಿಸಿ ದಾವಣಗೆರೆ ಕಡೆಗೆ ಹೋಗುತ್ತಿದ್ದೇನೆ. ಇದೊಂದು ಐತಿಹಾಸಿಕ ಕಾರ್ಯಕ್ರಮ, ನಾನು ಬೈಕ್ ಮೇಲೆ ಹೋಗುತ್ತಿರುವುದು ನನಗೆ ಹೆಮ್ಮೆ ಎನಿಸುತ್ತಿದೆ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ