2021-22 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪಿಯುಸಿ ವಿದ್ಯಾರ್ಥಿಗಳಿಗೆ 20,000 ರೂ., ಪದವಿ ವಿದ್ಯಾರ್ಥಿಗಳಿಗೆ 25,000 ರೂ., ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30,000 ರೂ. ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ 35,000 ಸಾವಿರ ರೂ.ಗಳನ್ನು ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ.
ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವೆಬ್ ಸೈಟ್ www.tw.kar.nic.in ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.
Laxmi News 24×7